“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
TSK
TSK · ವಿಮೋಚನಕಾಂಡ 21:13
Treasury of Scripture Knowledge references in ಕನ್ನಡ IRV.
¶ ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
“ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;
ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.