ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
TSK
TSK · ವಿಮೋಚನಕಾಂಡ 21:6
Treasury of Scripture Knowledge references in ಕನ್ನಡ IRV.
¶ ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.
ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”