TSK

TSK · ವಿಮೋಚನಕಾಂಡ 21:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.

ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.

ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.

¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.