TSK

TSK · ವಿಮೋಚನಕಾಂಡ 22:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.

¶ ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.

¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.

¶ “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,

‹ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.›

‹ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು”› ಅಂದನು.