TSK

TSK · ವಿಮೋಚನಕಾಂಡ 23:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

¶ “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

¶ ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.

ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.

¶ “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.

ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.