TSK

TSK · ವಿಮೋಚನಕಾಂಡ 23:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.

¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

¶ ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

¶ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.

ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,

ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.

¶ ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.

ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.

ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,

¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

¶ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.