TSK

TSK · ವಿಮೋಚನಕಾಂಡ 23:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.

ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.

ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.

ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು

ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.

ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.