ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
TSK
TSK · ವಿಮೋಚನಕಾಂಡ 23:33
Treasury of Scripture Knowledge references in ಕನ್ನಡ IRV.
ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.
¶ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.