TSK

TSK · ವಿಮೋಚನಕಾಂಡ 24:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.

¶ ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.

¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

¶ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.

ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.

ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.

ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.