ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ವಿಮೋಚನಕಾಂಡ 24:4
Treasury of Scripture Knowledge references in ಕನ್ನಡ IRV.
ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
¶ ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
¶ ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
“ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು
ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
¶ ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.