TSK

TSK · ವಿಮೋಚನಕಾಂಡ 25:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.

ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.

ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.