TSK

TSK · ವಿಮೋಚನಕಾಂಡ 25:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.

ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

¶ ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.

ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.

ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.

ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

¶ ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.