ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
TSK
TSK · ವಿಮೋಚನಕಾಂಡ 25:18
Treasury of Scripture Knowledge references in ಕನ್ನಡ IRV.
ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.
¶ ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.
ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
¶ ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.