ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.
TSK
TSK · ವಿಮೋಚನಕಾಂಡ 25:2
Treasury of Scripture Knowledge references in ಕನ್ನಡ IRV.
¶ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
¶ ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.
ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.