ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,
TSK
TSK · ವಿಮೋಚನಕಾಂಡ 26:1
Treasury of Scripture Knowledge references in ಕನ್ನಡ IRV.
ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,
¶ ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.
ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
¶ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).