TSK

TSK · ವಿಮೋಚನಕಾಂಡ 27:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.

ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.

“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.

ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.