TSK

TSK · ವಿಮೋಚನಕಾಂಡ 27:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.

ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.

ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.

¶ ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.

ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.