ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
TSK
TSK · ವಿಮೋಚನಕಾಂಡ 28:34
Treasury of Scripture Knowledge references in ಕನ್ನಡ IRV.
ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,