TSK

TSK · ವಿಮೋಚನಕಾಂಡ 28:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.

¶ ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.

ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.

ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.

ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.

ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.

ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.

ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,

ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.