TSK

TSK · ವಿಮೋಚನಕಾಂಡ 28:40

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.

ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.

ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.

¶ “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”