TSK

TSK · ವಿಮೋಚನಕಾಂಡ 28:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.

ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.

ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.

ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.