TSK

TSK · ವಿಮೋಚನಕಾಂಡ 28:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.

¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.

¶ ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.

ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.

ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.

ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.