TSK

TSK · ವಿಮೋಚನಕಾಂಡ 29:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

¶ “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.

ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.

ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.

“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,

ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.