TSK

TSK · ವಿಮೋಚನಕಾಂಡ 29:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.

¶ “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.

ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”

ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.

ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”

ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”

‹ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.›

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.