¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
TSK
TSK · ವಿಮೋಚನಕಾಂಡ 3:19
Treasury of Scripture Knowledge references in ಕನ್ನಡ IRV.
¶ ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
¶ ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.
ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.