ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
TSK
TSK · ವಿಮೋಚನಕಾಂಡ 3:20
Treasury of Scripture Knowledge references in ಕನ್ನಡ IRV.
ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.
ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.
ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.
ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.
ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.