TSK

TSK · ವಿಮೋಚನಕಾಂಡ 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.

ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.

ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.

ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.