ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
TSK
TSK · ವಿಮೋಚನಕಾಂಡ 30:12
Treasury of Scripture Knowledge references in ಕನ್ನಡ IRV.
“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
¶ ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
¶ ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
‹ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ›‹ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು”› ಎಂದು ಹೇಳಿದನು.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.