¶ ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
TSK
TSK · ವಿಮೋಚನಕಾಂಡ 30:23
Treasury of Scripture Knowledge references in ಕನ್ನಡ IRV.
ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
¶ “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.