ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,
TSK
TSK · ವಿಮೋಚನಕಾಂಡ 30:34
Treasury of Scripture Knowledge references in ಕನ್ನಡ IRV.
“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
¶ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?