TSK

TSK · ವಿಮೋಚನಕಾಂಡ 31:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.

ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

¶ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.

ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.

ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.

‹ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?›

ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.