ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
TSK
TSK · ವಿಮೋಚನಕಾಂಡ 32:12
Treasury of Scripture Knowledge references in ಕನ್ನಡ IRV.
¶ “‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.
ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ