ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.
TSK
TSK · ವಿಮೋಚನಕಾಂಡ 32:19
Treasury of Scripture Knowledge references in ಕನ್ನಡ IRV.
¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈ ಚಾಚು”› ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.