TSK

TSK · ವಿಮೋಚನಕಾಂಡ 32:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

¶ ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

¶ ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.