TSK

TSK · ವಿಮೋಚನಕಾಂಡ 32:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.

ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು

ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.

ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.

¶ ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

‹ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.›

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.