TSK

TSK · ವಿಮೋಚನಕಾಂಡ 32:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

¶ “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.

¶ “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.

ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.

ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”