TSK

TSK · ವಿಮೋಚನಕಾಂಡ 32:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.

ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.