TSK

TSK · ವಿಮೋಚನಕಾಂಡ 32:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.

ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,

ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.