TSK

TSK · ವಿಮೋಚನಕಾಂಡ 32:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.

ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.