TSK

TSK · ವಿಮೋಚನಕಾಂಡ 33:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

¶ ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.

‹ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ,›‹ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.›

ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.