¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
TSK
TSK · ವಿಮೋಚನಕಾಂಡ 33:4
Treasury of Scripture Knowledge references in ಕನ್ನಡ IRV.
¶ ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
¶ ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
¶ ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
¶ ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
¶ ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?