TSK

TSK · ವಿಮೋಚನಕಾಂಡ 34:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.

¶ ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

¶ ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.

¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.