ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
TSK
TSK · ವಿಮೋಚನಕಾಂಡ 34:13
Treasury of Scripture Knowledge references in ಕನ್ನಡ IRV.
¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
¶ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?
ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.