TSK

TSK · ವಿಮೋಚನಕಾಂಡ 34:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.

ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,

ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.

ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.

ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,

ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.