TSK

TSK · ವಿಮೋಚನಕಾಂಡ 34:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

¶ ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

¶ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.