ವಿಮೋಚನಕಾಂಡ 25:2
TSK
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
TSK
Treasury of Scripture Knowledge references in ಕನ್ನಡ IRV.
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
¶ ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.