TSK

TSK · ವಿಮೋಚನಕಾಂಡ 39:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.

ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು.

ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.

ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.

ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು.

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.