TSK

TSK · ವಿಮೋಚನಕಾಂಡ 4:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,

ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.

ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.