TSK

TSK · ವಿಮೋಚನಕಾಂಡ 4:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.

¶ ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.

¶ ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.

¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.

ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.

ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು.