ವಿಮೋಚನಕಾಂಡ 29:43
TSK
ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
TSK
Treasury of Scripture Knowledge references in ಕನ್ನಡ IRV.
ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
¶ ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
¶ ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.